
ಪ್ರಗತಿವಾಹಿನಿ ಸುದ್ದಿ: ಸೌದಿ ಅರೇಬಿಯಾದ ಮೆಕ್ಕಾ-ಮದೀನಾ ರಸ್ತೆಯಲ್ಲಿ ಖಾಸಗಿ ಬಸ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 45 ಭಾರತೀಯ ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿಯಾದ ಪರಿಣಾಮ ಬಸ್ ಹೊತ್ತಿ ಉರಿದಿದೆ. 45 ಜನರು ಸಾವನ್ನಪ್ಪಿದ್ದು, ಮೃತರು ತೆಲಂಗಾಣ ಮೂಲದವರು ಎಂದು ತಿಳಿದುಬಂದಿದೆ.
ಮೃತರಲ್ಲಿ 20 ಮಹಿಳೆಯರು, 12 ಮಕ್ಕಳು ಹಾಗೂ ಉಳಿದವರು ಮಧ್ಯವಯಸ್ಕ ಪುರುಷರು ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಅಪಘಾತದಲ್ಲಿ 45 ಭಾರತಿಯರ ಸಾವು ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.




