
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಕ್ಕಳ ಕಲಿಕಾ ಹಿತದೃಷ್ಟಿಯಿಂದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ. ಪಾಟೀಲ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವಿಶಾಲವಾಗಿದ್ದು ಇಲ್ಲಿನ ಬಾಗೇವಾಡಿ ಬ್ಲಾಕ್ ನಲ್ಲಿ ಮೊರಾರ್ಜಿ ವಸತಿ ಶಾಲೆ ಇಲ್ಲ. ಬೆಳಗಾವಿ ತಾಲೂಕಿನ ಇತರೆಡೆಯ ವಸತಿ ಶಾಲೆಗಳಲ್ಲಿ ಪ್ರವೇಶ ಸಿಗದೆ ಗ್ರಾಮೀಣ ಕ್ಷೇತ್ರದ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ.
ಹೀಗಾಗಿ ಬಾಗೇವಾಡಿ ಬ್ಲಾಕ್ ವ್ಯಾಪ್ತಿಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅವಶ್ಯಕತೆ ಇದ್ದು ಮಂಜೂರು ಮಾಡಿಸುವಂತೆ ಸಿ.ಸಿ. ಪಾಟೀಲ ಮನವಿ ಮಾಡಿದ್ದಾರೆ.
ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ