Kannada NewsKarnataka NewsLatest

ಖಾನಾಪುರ ತಾಲೂಕಿನ ಈ ಸಮಸ್ಯೆಗಳನ್ನು ಪರಿಹರಿಸಿ – ಡಾ. ಸೋನಾಲಿ ಸರ್ನೋಬತ್

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬಿಜೆಪಿ ಧುರೀಣೆ ಡಾ. ಸೋನಾಲಿ ಸರ್ನೋಬತ್ ಅವರು ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದರ್ಶನ್ ಹಾಗೂ ಪಶು ಸಂಗೋಪನಾ ಇಲಾಖೆ ಅಧಿಕಾರಿ ಡಾ. ಕುಲೇರ ಅವರಿಗೆ ಪ್ರತ್ಯೇಕ ಮನವಿಗಳನ್ನು ಗುರುವಾರ ಸಲ್ಲಿಸಿದ್ದಾರೆ.

ಖಾನಾಪುರ ತಾಲೂಕಿನ ಮೋಹಿಶೇತ್, ಆಟಿಯೆ, ಪಾಲಿ, ದೇಗಾಂವ, ಅಮಗಾಂವ, ಪಿಂಪಳೆ, ಕರಿಕಟ್ಟಿ, ನಂಜನಕೊಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಜನ ಪಡಿತರ ಪಡೆಯಲು 15-20 ಕಿ.ಮೀ. ದೂರ ಹೋಗಬೇಕಾಗಿರುವುದರಿಂದ ಆಯಾ ಗ್ರಾಮಗಳಲ್ಲೇ ಅವರಿಗೆ ಪಡಿತರ ವ್ಯವಸ್ಥೆ ಮಾಡುವಂತೆ ಅವರು ಆಗ್ರಹಿಸಿದ್ದಾರೆ.

Home add -Advt

ಪಾರಿಷ್ವಾಡ ಗ್ರಾಮವು ಜಿಲ್ಲಾ ಪಂಚಾಯಿತಿ ಕ್ಷೇತ್ರವಾಗಿದ್ದು  ಇಲ್ಲಿನ ಪಶು ಚಿಕಿತ್ಸಾಲಯದಲ್ಲಿ ಪಶು ವೈದ್ಯಕೀಯ ನಿರೀಕ್ಷಕರ ಹುದ್ದೆ ಖಾಲಿ ಇದೆ. ಇದರಿಂದ ಸ್ಥಳೀಯ ರೈತರಿಗೆ ಪಶುಗಳ ಆರೈಕೆಗೆ ತೊಂದರೆಯಾಗಿದ್ದು ಈ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬೆಳಗಾವಿ ಮಹಾನಗರದ ಜನರಿಗೆ 2 ಮಹತ್ವದ ಸೂಚನೆಗಳು

Related Articles

Back to top button