ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ, ಅದ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು ಸಂತಸ. ಆದರೆ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ನನಗೆ ಆಹ್ವಾನ ನೀಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದಾರೆ. ಆದರೆ ನನಗೆ ಅಧಿಕೃತವಾಗಿ ಆಹ್ವಾನ ನೀಡಿಲ್ಲ. ಶಿಷ್ಠಾಚಾರದ ಪ್ರಕಾರ ವಿಪಕ್ಷ ನಾಯಕನಿಗೆ ಬಂದು ಆಹ್ವಾನ ನೀಡಬೇಕಿತ್ತು. ಆದರೆ ಅಧಿಕೃತವಾಗಿ ಆಹ್ವಾನಿಸಿಲ್ಲ. ಅವರು ಬಂದು ಕರೆದಿದ್ದರೆ ಕಾರ್ಯಕ್ರಮಕ್ಕೆ ಹೋಗೋಣ ಎಂದುಕೊಂಡಿದ್ದೆ. ಆದರೆ ಆಹ್ವಾನ ನೀಡಿಲ್ಲ. ಹಾಗಾಗಿ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ ಎಂದರು.
ಪುನೀತ್ ರಾಜ್ ಕುಮಾರ್ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು ಸಂತಸದ ವಿಚಾರ ಎಂದು ಹೇಳಿದರು.
ಪುನೀತ್ ರಾಜ್ ಕುಮಾರ್ ಗೆ ಕನ್ನಡ ರತ್ನ ಪ್ರಶಸ್ತಿ; ಬೆಂಗಳೂರಿಗೆ ಆಗಮಿಸಿದ ನಟ ರಜನಿಕಾಂತ್
https://pragati.taskdun.com/latest/rajanikanthbngalorevisitkannada-ratha-awardpuneeth-raj-kumar/




