*BREAKING: ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಸಂಪುಟ ಸಭೆ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಮುಟ್ಟಿನ ರಜೆ ಅಥವಾ ಋತು ಚಕ್ರ ರಜೆ ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಬಹುರಾಷ್ಟ್ರೀಯ ಕಂಪನಿಗಳು, ಐಟಿ, ಖಾಸಗಿ, ಕೈಗಾರಿಕಾ ವಲಯಗಳಲ್ಲಿ ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆ ನೀಡಲಾಗುವುದು ಎಂದು ಹೇಳಿದರು.
1992ರಲ್ಲಿ ದೇಶದಲ್ಲಿ ಬಿಹಾರ ರಾಜ್ಯದಲ್ಲಿ ಮೊದಲ ಬಾರಿಗೆ ವೇತನ ಸಹಿತ ಎರಡು ದಿನ ಮುಟ್ಟಿನ ರಜೆ ಜಾರಿಯಾಯಿತು. ಬಳಿಕ ಕೆಲ ನಿರ್ಬಂಧಗಳ ಜೊತೆಗೆ ಉತ್ತರ ಪ್ರದೇಶ, ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿಯೂ ಜಾರಿಗೆ ಬಂದಿದೆ. ಇದೀಗ ಕರ್ನಾಟಕದಲ್ಲಿಯೂ ಈ ಮಹತ್ವದ ನಿರ್ಧಾರ ಕೈಗೊಂಡಿದೆ.