EducationKannada NewsKarnataka NewsLatestPolitics
*ಕಾಲೇಜು ವಿದ್ಯಾರ್ಥಿನಿಯರಿಗೂ ಸಿಗಲಿದೆಯಾ ಋತುಚಕ್ರ ರಜೆ? ವೈದ್ಯಕೀಯ ಶಿಕ್ಷಣ ಸಚಿವರು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಮಹಿಳಾ ನೌಕರರಿಗೆ ಋತುಚಕ್ರ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರಿಗೂ ಋತುಚಕ್ರ ರಜೆ ನೀಡುವಂತೆ ಒತ್ತಾಯಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾಲೇಜು ವಿದ್ಯಾರ್ಥಿನಿಯಯರು, ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಕೊಡುವ ಬಗ್ಗೆ ಮುಖ್ಯಮಂತ್ರಿಗಳು ಸೂಚನೆ ಕೊಟ್ಟರೆ ಮಾಡುತ್ತೇವೆ. ಸಿಎಂ ಆದೇಶವೇ ಅಂತಿಮ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಇದೇ ವೇಳೆ ಎಂಜಿನಿಯರ್ ಮತ್ತು ಮೆಡಿಕಲ್ ಸೀಟು ಶುಲ್ಕ ಹೆಚ್ಚಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಇನ್ನು ಕಾಲೇಜು ಹಂತದಲ್ಲಿಯೇ ಚುನಾವಣೆ ಮಾಡುವ ಇಚ್ಛೆ ಇದೆ. ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ ಎಂದು ತಿಳಿಸಿದ್ದಾರೆ.




