ಪ್ರಗತಿವಾಹಿನಿ ಸುದ್ದಿ, ರಾಯಚೂರು: ಮಂತ್ರಾಲಯ ಸೇರಿದಂತೆ ಕರ್ನೂಲು ಲೋಕಸಭಾ ಕ್ಷೇತ್ರವನ್ನು ಕರ್ನಾಟಕಕ್ಕೆ ಸೇರಿಸಿ ಎಂದು ತೆಲುಗು ದೇಶಂ ಪಕ್ಷದ ಮಾಜಿ ಶಾಸಕ ತಿಕ್ಕಾರೆಡ್ಡಿ ಆಗ್ರಹಿಸಿದ್ದಾರೆ.
ಮಂತ್ರಾಲಯ ಹಾಗೂ ಕಾರ್ನೂಲು ಕ್ಷೇತ್ರವನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಆಗ್ರಹಿಸಿ ತಿಕ್ಕಾರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1956ರ ವರೆಗೆ ನಾವು ಬಳ್ಳಾರಿ ಜಿಲ್ಲೆಗೆ ಒಳಪಟ್ಟಿದ್ದೆವು. ನಾವೆಲ್ಲಾ ಕನ್ನಡ ಭಾಷೆಯನ್ನೇ ಮಾತನಾಡುತ್ತೇವೆ. ಇನ್ನು ಮಂತ್ರಾಲದಲ್ಲಿ ಕನ್ನಡಿಗರೇ ಹೆಚ್ಚಿದ್ದಾರೆ. ಭಾಷೆಯ ವಿಚಾರಕ್ಕೆ ಬಂದರೆ ಬಳ್ಳಾರಿಗೆ ಹತ್ತಿರವಾಗಿದ್ದೇವೆ. ಬಳ್ಳಾರಿಯಲ್ಲಿ ಹೊಸಪೇಟೆ ತುಂಗಭದ್ರಾ ಡ್ಯಾಂ ಇದೆ. ನಮಗೆ ಕೃಷಿಗೆ ಅನುಕೂಲವಾಗುತ್ತದೆ. ನೀರು, ಮಕ್ಕಳಿಗೆ ವಿದ್ಯಾಭ್ಯಾಸ ಎಲ್ಲವೂ ನಮಗೆ ಸಿಗುತ್ತದೆ. ಹಾಗಾಗಿ ನಮ್ಮನ್ನು ಕರ್ನಾಟಕದಾ ಜತೆ ವಿಲೀನ ಮಾಡಿ ಎಂದು ಒತ್ತಾಯಿಸಿದ್ದಾರೆ.
ಆಂಧ್ರಕ್ಕೆ ಈಗ ಮೂರು ರಾಜಧಾನಿಗಳಾಗಿವೆ. ಆಡಳಿತಾತ್ಮಕ ರಾಜಧಾನಿಯಾಗಿ ವಿಶಾಖಪಟ್ಟಣಂ, ಹೈಕೋರ್ಟ್ ಗಾಗಿ ಕರ್ನೂಲ್, ಭೂಮಿ ಕಳೆದುಕೊಂಡ ರೈತರಿಗಾಗಿ ಅಮರಾವತಿಯನ್ನು ಮುಖ್ಯಮಂತ್ರಿ ಜಗಾನ್ ಮೋಹನ್ ರೆಡ್ದಿ ಮಾಡಿದ್ದಾರೆ. ಒಂದುಕಡೆಯಿಂದ ಮತ್ತೊಂದು ಕಡೆಗೆ ಹೋಗಲು ನಮಗೆ ಎರಡು ದಿನ ಬೇಕು. ಅಷ್ಟು ದೂರದ ರಾಜಧಾನಿ ನಮಗೆ ಬೇಡ ದಿನಕ್ಕೊಂದು ರಾಜಧಾನಿ ಬದಲಿಸುತ್ತಿದ್ದರೆ ನಮ್ಮ ಬದುಕು ಸಾಗಿಸುವುದು ದುಸ್ತರವಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ