Belagavi NewsBelgaum NewsKannada NewsKarnataka NewsLatest

*ಎಂಇಎಸ್ ಮುಖಂಡ ಶುಭಂ ಸೇಳಕೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ರಾಜ್ಯೋತ್ಸವದ ವಿರುದ್ಧವಾಗಿ ಅನುಮತಿ ಇಲ್ಲದೆ ಕರಾಳ‌ ದಿನಾಚರಣೆ ನಡೆಸಿ ಪುಂಡಾಟ ಮೆರೆದಿದ್ದ ಎಂಇಎಸ್ ಮುಖಂಡ ಶುಭಂ ಸೇಳಕೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಗೋವಾವೇಸ್ ಸರ್ಕಲ್ ಬಳಿ ಶುಭಂ ಸೇಳಕೆಯನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗೋವಾದತ್ತ ಪರಾರಿಯಾಗುತ್ತಿದ್ದ ಶುಭಂನನ್ನು ಸಿನಿಮಾ ಸ್ಟೈಲ್ ನಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಭಾಷಾ ಸಾಮರಸ್ಯ, ಶಾಂತಿ ಭಂಗ ಸೇರಿದಂತೆ ಶುಭಂ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button