*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಜೆಇ*

ಪ್ರಗತಿವಾಹಿನಿ ಸುದ್ದಿ: ಲಂಚದ ಹಣ ಪಡೆಯುತ್ತಿದ್ದಾಗಲೇ ಮೆಸ್ಕಾಂ ಜೆಇ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜೆಇ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದವರು. ಮೆಸ್ಕಾಂ ಕಚೇರಿಯಲ್ಲಿಯೇ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಜೆಇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು ಲೋಕಾಯುಕ್ತ ಎಸ್ ಪಿ ಸ್ನೇಹಾ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಜೆಇ ಪ್ರಶಾಂತ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. … Continue reading *ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಜೆಇ*