ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಎಂಇಎಸ್ ಹಾಗೂ ಶಿವಸೇನೆ ಪುಂಡಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಬೆಳಗಾವಿ ಗಡಿಯಲ್ಲಿ ಸಿಎಂ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಸೇನೆ ಪ್ರಮುಖರಾದ ಚಂದ್ರಕಾಂತ್ ಮೈಗುರೆ ನೇತೃತ್ವದಲ್ಲಿ ಈ ರೀತಿ ಪುಂದಾಟ ನಡೆದಿದ್ದು, ಸಿಎಂ ಬೊಮ್ಮಾಯಿ ಪ್ರತಿಕೃತಿ ಜತೆಗೆ ಕನ್ನಡ ಬಾವುಟಕ್ಕೂ ಬೆಂಕಿ ಹಚ್ಚಿದ್ದಾರೆ.
ಎಂಇಎಸ್ ಪುಂಡರ ವಿರುದ್ಧ ರಾಜ್ಯ ಸರ್ಕಾರ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿದ್ದು, ಎಂಇಎಸ್ ನಿಯಂತ್ರಣಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಸಿಡಿದೆದ್ದಿರುವ ಎಂಇಎಸ್, ಶಿವಸೇನೆ ಪುಂಡರು ಬೆಳಗಾವಿ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಮತ್ತೆ ದಾಂಧಲೆ ಆರಂಭಿಸಿದ್ದಾರೆ.
ಶರಣರ ಸಂಸ್ಕೃತಿಗೆ ಮುಖ್ಯಮಂತ್ರಿಗಳು ಹಾಗೂ ಬಿಜೆಪಿಯಿಂದ ದ್ರೋಹವಾಗಿದೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ