*29ರವರೆಗೂ ಭಾರಿ ಮಳೆ ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜುಲೈ 29 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ರಾಮನಗರ, ಮಂಡ್ಯ ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಈ ಬಾರಿ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯು ತನ್ನ ಆರ್ಭಟ ತೋರಿದ್ದು ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ದೊಡ್ಡ ಅವಾಂತರ ಸೃಷ್ಟಿಯಾಗುವ ಸಾಧ್ಯತೆ ಇದೆ. ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮ ಕೂಡ ಕೈಗೊಂಡು ಎಚ್ಚರಿಕೆ ವಹಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



