*ರಾಜ್ಯದ 15 ಜಿಲ್ಲೆಗಳಲ್ಲಿ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ: ಬೇಸಿಗೆ ಆರಂಭಕ್ಕೂ ಮುನ್ನಾ ಮಳೆ ಸುರಿಯಲಿದೆ. ಬಂಗಾಳಕೊಲ್ಲಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಕೆಲವೆಡೆ ಹವಾಮಾನ ಇಲಾಖೆ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಚಳಿಯ ಪ್ರಮಾಣ ಸಾಕಷ್ಟು ಕುಸಿತ ಕಂಡಿದೆ. ಹೀಗೆ ಚಳಿ ಪ್ರಮಾಣ ಇಳಿಕೆಯಾದ ಕಾರಣ ಜನರು ಕೂಡ ಖುಷಿಯಾಗಿದ್ದರು. ಚಳಿ ಕಡಿಮೆಯಾದ ಸಮಯದಲ್ಲೇ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಕನ್ನಡಿಗರು ಚಿಂತೆ ಮಾಡುವಂತೆ ಆಗಿದೆ. ಇದನ್ನ ಹೊರತುಪಡಿಸಿದರೆ ದಾವಣಗೆರೆ ಜಿಲ್ಲೆಯಲ್ಲಿ 11 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಾಯುಭಾರ ಕುಸಿತ ಹಿನ್ನೆಲೆ ನಾಳೆಯಿಂದ ಕೆಲವೆಡೆ ಮಳೆ ಆಗುವ ನಿರೀಕ್ಷೆ ಇದೆ ವಿಜಯನಗರ, ತುಮಕೂರು, ಶಿವಮೊಗ್ಗ ರಾಮನಗರ, ಮೈಸೂರು, ಮಂಡ್ಯ ಕೋಲಾರ, ಕೊಡಗು ಹಾಗೂ ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ ಸೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ