Latest

ಮೀಟೂ ಪ್ರಕರಣ; ನಟಿ ಶೃತಿ ಹರಿಹರನ್ ಗೆ ನೋಟೀಸ್ ಜಾರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶೃತಿ ಹರಿಹರನ್ ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದ್ದಾರೆ.

2018ರಲ್ಲಿ ನಟಿ ಶೃತಿ ಹರಿಹರನ್, ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದರು. ಸಿನಿಮಾ ಚಿತ್ರೀಕರಣದ ವೇಳೆ ಅರ್ಜುನ್ ಸರ್ಜಾತನ್ನ ಮೇಲೆ ಲೈಮ್ಗಿಕ ದೌರ್ಜನ್ಯ ನಡೆಸಿದ್ದಾಗಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶೃತಿ ಹರಿಹರನ್ ದೂರಿನ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ 354, 354 A ಮತ್ತು 506 ಐಪಿಸಿ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.

Home add -Advt

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶೃತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಪ್ರಕರಣ ಸಂಬಂಧ ದ್ಸೂಕ್ತ ಸಾಕ್ಷಾಧಾರಗಳು ಸಿಗದ ಕಾರಣಕ್ಕೆ ಪೊಲೀಸರಿಂದ ಬಿ ರಿ ಪೋರ್ಟ್ ಸಲ್ಲಿಸಲು ತಯಾರಿ ನಡೆದಿದೆ ಎಂದು ಹೇಳಲಾಗುತ್ತಿದೆ.

Related Articles

Back to top button