Kannada NewsKarnataka NewsLatest

*ಮಹಿಳಾ ಭದ್ರತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಮೆಟ್ರೋ ಅಧಿಕಾರಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮೆಟ್ರೋ ಮಹಿಳಾ ಭದ್ರತಾ ಸಿಬ್ಬಂದಿಗಳಿಗೆ ಮೆಟ್ರೋ ನಿಲ್ದಾಣದ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣದ ಅಸಿಸ್ಟೆಂಟ್ ಸೆಕ್ಷನ್ ಅದಿಕರಿ ವಿರುದ್ಧ ಆರೋಪ ಕೇಳಿಬಂದಿದ್ದು, ಮಹಿಳಾ ಸಿಬ್ಬಂದಿಗಳು ದೂರು ದಾಖಲಿಸಿದ್ದಾರೆ.

ರಾಜಾಜಿನಗರ ಮೆಟ್ರೋ ನಿಲ್ದಾಣದ ಅಸಿಸ್ಟೆಂಟ್ ಸೆಕ್ಷನ್ ಅಧಿಕಾರಿ ಗಜೇಂದ್ರ ಪಿ. ಮಹಿಳಾ ಭದ್ರತಾ ಸಿಬ್ಬಂದಿಗಳಿಗೆ ಅಶ್ಲೀಲ ಪದಗಳನ್ನು ಬಳಸ್ವುದು, ಮೈ ಕೈ ಮುಟ್ಟಿ ಮಾತನಾಡುವುದು ಸೇರಿದಂತೆ ಕಿರುಕುಳ ನೀಡುತ್ತಿದ್ದಾರೆ. ಸಹಕರಿಸದಿದ್ದರೆ ಬೇರೆಡೆ ವರ್ಗಾವಣೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳಾ ಸಿಬ್ಬಂದಿಗಳು ಆರೋಪಿಸಿದ್ದಾರೆ.

Home add -Advt

ಅಧಿಕಾರಿ ಕಿರುಕುಳಕ್ಕೆ ಬೇಸತ್ತ ಮಹಿಳಾ ಭದ್ರತಾ ಸಿಬ್ಬಂದಿಗಳು ಸುಬ್ರಹ್ಮಣ್ಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.


Related Articles

Back to top button