![](https://pragativahini.com/wp-content/uploads/2025/01/sabhe-cm-.jpg)
ಪ್ರಗತಿವಾಹಿನಿ ಸುದ್ದಿ : ಮೆಟ್ರೋ ಟಿಕೆಟ್ ದರ ಏರಿಕೆಗೆ ಬೆಂಗಳೂರಿನ ಜನರು ಗರಂ ಆಗಿದ್ದಾರೆ. ಮೆಟ್ರೋ ಟಿಕೆಟ್ ದರ ಏರಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಸ್ವತಃ ಸಿಎಂ ಸಿದ್ದರಾಮಯ್ಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮುಂದಾಗಿದ್ದಾರೆ.
ಬೆಂಗಳೂರು ಮೆಟ್ರೊ ರೈಲು ನಿಗಮವು ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.
ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
“ಸಿಎಂ ಪತ್ರ:
ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.
ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ