![](https://pragativahini.com/wp-content/uploads/2022/07/FIR.jpg)
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿಯಲ್ಲಿ ನಮ್ಮ ಮೆಟ್ರೋ ಪ್ರಯಾಣ ದರ ಭಾರಿ ಏರಿಕೆಯಾಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು ಪರದಾಡುವಂತಾಗಿದೆ. ಮೆಟ್ರೋ ಪ್ರಯಾಣದರ ಇಳಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್-ಎಬಿವಿಪಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಆದರೆ ಈಗ ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಳಿ ನಿನ್ನೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬಿ.ಎಂ.ಆರ್.ಸಿ.ಎಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಮೆಟ್ರೋ ಪ್ರಯಾಣ ದರ ಇಳಿಸುವಂತೆ ಒತ್ತಾಯಿಸಿದ್ದರು.
ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಬಿವಿಪಿಯ 16 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ