
ಪ್ರಗತಿವಾಹಿನಿ ಸುದ್ದಿ: ನಮ್ಮ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ದೊಡ್ದಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ.
ನವೀನ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಸಾಲದ ಸುಳಿಗೆ ಸಿಲುಕಿ ನವೀನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ದೊಡ್ಡಕಲ್ಲಸಂದ್ರ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ನವೀನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವೀನ್ ಕುಮಾರ್ ಹಲವೆಡೆ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ಈ ಹಿಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು. ನಿನ್ನೆ ಸಂಜೆ ಮೆಟ್ರೋ ಹಳಿಗೆ ಹಾರುವ ಮುನ್ನ ಅಣ್ಣನಿಗೆ ಕರೆ ಮಾಡಿ ಸಾಲ ತೀರಿಸಲು ಹಣ ಕೇಳಿದ್ದರು ಎನ್ನಲಾಗಿದೆ. ಕೆಲವೇ ಸಮಯದಲ್ಲಿ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ