Kannada NewsKarnataka NewsLatest

*BREAKING: ಮೆಟ್ರೋ ರೈಲಿಗೆ ಹಾರಿ ಯುವಕ ಆತ್ಮಹತ್ಯೆ: ಮೆಟ್ರೋ ಸಂಚಾರ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬ ಮೆಟ್ರೋ ರೈಲಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಶಾಂತನಗೌಡ (30) ಆತ್ಮಹತ್ಯೆಗೆ ಶರಣಾದ ಯುವಕ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಮೂಲದ ಯುವಕ ಎಂದು ತಿಳಿದುಬಂದಿದೆ. ಪ್ರಯಾಣಿಕರಂತೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಯುವಕ ಮೆಟ್ರೋ ರೈಲು ಬರುತ್ತಿದ್ದಂತೆ ಇದ್ದಕ್ಕಿದ್ದಂತೆ ಹಳಿಗೆ ಜಿಗಿದಿದ್ದಾನೆ. ಕ್ಷಣಾರ್ಧದಲ್ಲಿ ಯುವಕನ ದೇಹ ಮೆಟ್ರ‍ೊ ರೈಲಿಗೆ ಸಿಲುಕಿ ಛಿದ್ರ ಛಿದ್ರವಾಗಿದೆ.

Home add -Advt

ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ತಾತ್ಕಾಲಿಕವಾಗಿ ನೇರಳೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಯುವಕನ ಮೃತದೇಹವನ್ನು ರಾಜರಾಜೇಶ್ವರಿ ನಗರ ಆಸ್ಪತ್ರೆಗೆ ರವಾನಿಸಲಾಗಿದೆ. ಯುವಕ ಯಾರು? ಆತ್ಮಹತ್ಯೆಗೆ ಕರಣವೇನು ಎಂಬುದು ತಿಳಿದುಬಂದಿಲ್ಲ.


Related Articles

Back to top button