ಪ್ರಗತಿವಾಹಿನಿ ಸುದ್ದಿ; ಚೆನ್ನೈ: MI-17V5 ಹೆಲಿಕಾಪ್ಟರ್ ಪತನ ದುರಂತದಲ್ಲಿ ಮೃತಪಟ್ಟ ಸೇನಾಧಿಕಾರಿಗಳ ಪಾರ್ಥಿವ ಶಸೀರ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತಕ್ಕೀಡಾಗಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ ಬಳಿ ನಡೆದಿದೆ.
ನಿನ್ನೆ ತಮಿಳುನಾಡು ಕುನೂರು ಬಳಿ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಜನರು ಮೃತಪಟ್ಟಿದ್ದರು. ಹುತಾತ್ಮ ಯೋಧರ ಪಾರ್ಥಿವ ಶರೀರವನ್ನು ದೆಹಲಿಗೆ ರವಾನಿಸಲಾಗುತ್ತಿದೆ. ಮೃತ ಸೇನಾಧಿಕಾರಿಗಳ ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬುಲೆನ್ಸ್ ಒಂದು ಮೆಟ್ಟುಪಾಳ್ಯಂ ಬಳಿಯ ಸುಲೂರು ಮಾರ್ಗಮಧ್ಯೆ ಗೋಡೆಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಹಲವು ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಖ್ಯಾತ ಪ್ರವಚನಕಾರ ಡಾ.ಈಶ್ವರ ಮಂಟೂರ ಇನ್ನಿಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ