ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನದಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಬಿಪಿನ್ ರಾವತ್ ಗಂಭೀರವಾಗಿ ಗಾಯಗೊಂಡಿದ್ದಾರೆ.
Mi-17V5 ವಿಶೇಷ ವಿಮಾನದಲ್ಲಿ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು ವೆಲ್ಲಿಂಗ್ಟನ್ ಸೇನಾ ಕಾಲೇಜಿನಲ್ಲಿ ಆಯೋಜಿಸಿದ್ದ ಸೆಮಿನಾರ್ ನಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಸೂಲೂರಿನಿಂದ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲ ಸಮಯದಲ್ಲಿ ಕುನ್ನೂರು ಬಳಿ ನೀಲಗಿರಿ ಬೆಟ್ಟದಲ್ಲಿ ಪತನಗೊಂಡಿದೆ. ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳುಗಳ ಪೈಕಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನು ದುರಂತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಹೆಲಿಕಾಪ್ಟರ್ ದುರಂತ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಗೆ ಗಂಭೀರ ಗಾಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ