Karnataka News

*ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಗೈಡ್ ಲೈನ್ಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಕಿರುಕುಳದಿಂದ ಅದೆಷ್ಟೋ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದರೆ ಇನ್ನು ಹಲವರು ಆತ್ಮಹತ್ಯೆಯಂತಹ ದಾರಿ ಹಿಡಿಯುತ್ತಿದ್ದಾರೆ. ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದೆ.

ಫೈನಾನ್ಸ್ ನವರಿಂದ ಆಗುತ್ತಿರುವ ತೊಂದರೆಗಳನ್ನು ನಿಯಂತ್ರಿಸಲು ರಾಜ್ಯದಲ್ಲಿ ಗೈಡ್ ಲೈನ್ಸ್ ಜಾರಿ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮೈಕ್ರೋ ಫೈನಾನ್ಸ್ ವಿಚಾರವಾಗಿ ಈಗಾಗಲೇ ಸರ್ಕಾರದ ಮಟ್ಟದಲ್ಲಿ ಎರಡು ಸಭೆಗಳನ್ನು ನಡೆಸಲಾಗಿದೆ. ಸಭೆಯಲ್ಲಿ ಕೆಲವೊಂದು ಗೈಡ್ ಲೈನ್ಸ್ ಜಾರಿಗೆ ತರಲು ಸೂಚನೆ ನೀಡಲಾಗಿದೆ. ಸರ್ಕಾರದ ಸೂಚನೆಯಂತೆ ಮಾರ್ಗಸೂಚಿ ಜಾರಿಗೆ ತರಲಾಗುವುದು ಎಂದು ಹೇಳಿದರು.

ಇನ್ನು ಮೀಟರ್ ಬಡ್ಡಿ ದಂಧೆಕೋರರ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ. ಯಾರಿಗೇ ಆದರೂ ಫೈನಾನ್ಸ್ ನವರಿಂದ ಸಮಸ್ಯೆ, ತೊಂದರೆಯಾದಲ್ಲಿ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Home add -Advt

Related Articles

Back to top button