![](https://pragativahini.com/wp-content/uploads/2024/08/parameshwar-.jpg)
ಪ್ರಗತಿವಾಹಿನಿ ಸುದ್ದಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸುಗ್ರೀಜ್ಞೆ ಜಾರಿಗೆ ತರಲಾಗಿವುದು. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರಲಾಗುವುದು ಎಂದರು.
ಮಾರ್ಚ್ ನಲ್ಲಿ ಅಧಿವೇಶನ ನಡೆಯಲಿದೆ. ಆದರೆ ಅಲ್ಲಿಯವರೆಗೆ ಕಾಯಲು ಸಾಧ್ಯವಿಲ್ಲ ಹಾಗಾಗಿ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುತ್ತೇವೆ. ಕಾನೂನು ಸಚಿವರು ಸೇರಿದಂತೆ ಎಲ್ಲರೂ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಚರ್ಚಿಸುತ್ತೇವೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ