
ಪ್ರಗತಿವಾಹಿನಿ ಸುದ್ದಿ; ಕೊಲ್ಕತ್ತಾ: ಮಧ್ಯಾಹ್ನದ ಬಿಸಿಯೂಟದ ಪಾತ್ರೆಯಲ್ಲಿ ಹಾವು ಪತ್ತೆಯಾಗಿದ್ದು, 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಬೇಳೆ ತುಂಬಿದ್ದ ಕಂಟೈನರ್ ನಲ್ಲಿ ಹಾವು ಕಾಣಿಸಿಕೊಂಡಿದೆ. ವಿಷಯುಕ್ತ ಬಿಸಿಯೂಟ ಸೇವಿಸಿದ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ತಕ್ಷಣವೇ ಅಸ್ವಸ್ಥ ಮಕ್ಕಳನ್ನು ರಾಂಪುರ್‌ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ಗ್ರಾಮದ ಹಲವರು ಜಿಲ್ಲಾ ಪ್ರಾಥಮಿಕ ಶಾಲಾ ನಿರೀಕ್ಷಕರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಸ್ತುತ ಮಾಹಿತಿ ಪ್ರಕಾರ ಒಬ್ಬ ವಿದ್ಯಾರ್ಥಿಯನ್ನು ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಘಟನೆ ಬೆನ್ನಲ್ಲೇ ಪೋಷಕರು ಶಾಲೆಯ ಮುಖ್ಯಶಿಕ್ಷಕರು ಹಾಗೂ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
*RTI ಕಾರ್ಯಕರ್ತ ರಾಮಕೃಷ್ಣ ಹತ್ಯೆ ಕೇಸ್: ಪ್ರಮುಖ ಆರೋಪಿ PDO ಎಸ್ಕೇಪ್*
https://pragati.taskdun.com/rti-activistramakrishna-murder-casedavanagereaccused-pdo-escape/