ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಿಗ್-29ಕೆ ತರಬೇತಿ ವಿಮಾನ ಅಪಘಾತಕ್ಕೀಡಾಗಿದ್ದು, ಅರಬ್ಬಿ ಸಮುದ್ರ ತೀರದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ದುರಂತಕ್ಕೀಡಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ.
ವಿಮಾನದಲ್ಲಿ ಇಬ್ಬರು ಪೈಲಟ್ ಗಳಿದ್ದು, ಓರ್ವ ಪೈಲಟ್ ನನ್ನು ರಕ್ಷಿಸಲಾಗಿದೆ. ಇನ್ನೋರ್ವ ಪೈಲಟ್ ಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ವಿಮಾನ ಪತನಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ಕಳೆದ ಒಂದು ವರ್ಷದಲ್ಲಿ ಮಿಗ್-29 ತರಬೇತಿ ವಿಮಾನದ ಮೂರನೇ ಅಪಘಾತ ಇದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ