Kannada NewsKarnataka NewsNational

ಯಾತ್ರಿಕರ ಬಸ್ ಮೇಲೆ ಉಗ್ರರ ದಾಳಿ: 10 ಜನರ ಸಾವು

ಪ್ರಗತಿವಾಹಿನಿ ಸುದ್ದಿ: ಸತತ ಮೂರನೆ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದರೆ, ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೇರೆದಿದ್ದಾರೆ.‌ ಯಾತ್ರಿಕರ ಬಸ್ ಮೇಲೆ ದಾಳಿ ಮಾಡಿರುವ ಉಗ್ರರು, ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರಳಿದೆ.‌ 

ಯಾತ್ರಾರ್ಥಿಗಳನ್ನು ಶಿವಖೋರಿ ದೇವಸ್ಥಾನಕ್ಕೆ ಕರೆದೊಯ್ಯುತ್ತಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದು 10 ಜನ ಮೃತಪಟ್ಟ ದಾರುಣ ಘಟನೆ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ. ಆದರೆ ಬಸ್ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರಿಂದ, ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಬಸ್ ಶಿವ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ, ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿಕೊಂಡಿರುವ ಭಯೋತ್ಪಾದಕರ ಗುಂಪಿನಿಂದಲೇ ಈ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. 

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಸ್ಥಳದಲ್ಲಿ ಸೇನೆ ಮತ್ತು ಅರೆಸೇನಾ ಪಡೆಗಳ ತಂಡ ಬೀಡುಬಿಟ್ಟಿದೆ. ಘಟನಾ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Home add -Advt

Related Articles

Back to top button