Latest

ಸರ್ಕಾರಿ ಕಚೇರಿಯಲ್ಲಿ ದುಷ್ಕರ್ಮಿ ಅಟ್ಟಹಾಸ; ಮೂವರು ಮಹಿಳೆಯರ ಮೇಲೆ ತಲ್ವಾರ್ ನಿಂದ ದಾಳಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಸರ್ಕಾರಿ ಕಚೇರಿಯಲ್ಲಿ ಹಾಡಹಗಲೇ ದುಷ್ಕರ್ಮಿಯೊಬ್ಬ ಮಹಿಳೆಯರ ಮೇಲೆ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನ ಕರಂಗಲಪಾಡಿಯಲ್ಲಿ ನಡೆದಿದೆ.

ಸರ್ಕಾರಿ ಕಚೇರಿಗೆ ಏಕಾಏಕಿ ನುಗ್ಗಿದ ದುಷ್ಕರ್ಮಿ ತಲ್ವಾರ್ ಹಿಡಿದು ನಿರ್ಮಲಾ, ರೀನಾ ರಾಯ್ ಹಾಗೂ ಗುಣವತಿ ಎಂಬ ಮೂವರು ಮಹಿಳೆಯರ ಮೇಲೆ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂದ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ನಿರ್ಮಲಾ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Home add -Advt

ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಬರ್ಕೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಯ ದಾಳಿಗೆ ಕಾರಣ ತಿಳಿದುಬಂದಿಲ್ಲ.
ಬೆಲೆ ಏರಿಕೆ ವಾಕ್ಸಮರ: ಭೂತದ ಬಾಯಲ್ಲಿ ಭಗವದ್ಗೀತೆ; ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

Related Articles

Back to top button