Kannada NewsKarnataka NewsNationalTech

*ಸಮುದ್ರ ತೀರದ ಬಂಡೆಗೆ ಡಿಕ್ಕಿ ಹೊಡೆದ ಮಿಲಿಟರಿ ವಿಮಾನ: 29 ಜನ ಸಾವು*

ಪ್ರಗತಿವಾಹಿನಿ ಸುದ್ದಿ: ರಷ್ಯಾದ ವಾಯುಪಡೆಗೆ ಸೇರಿದ ಎಎನ್-26 (An-26) ಸರಕು ಸಾಗಣೆ ಮಿಲಿಟರಿ ವಿಮಾನವೊಂದು ಕ್ರಿಮಿಯಾ ಪ್ರಾಂತ್ಯದಲ್ಲಿ ಭೀಕರ ಅಪಘಾತಕ್ಕೆ ಈಡಾಗಿದ್ದು, 29 ಜನ ಸೈನಿಕರು ಸಾವನ್ನಪ್ಪಿದ್ದಾರೆ.

ಈ ವಿಮಾನವು ತನ್ನ ನಿಯಮಿತ ಹಾರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನವು ನಿಯಂತ್ರಣ ತಪ್ಪಿ ಸಮುದ್ರ ತೀರದ ಕಡಿದಾದ ಬಂಡೆಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಅಪಘಾತದ ತೀವ್ರತೆಗೆ ವಿಮಾನವು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ದಟ್ಟವಾದ ಹೊಗೆ ಆವರಿಸಿತ್ತು. ಘಟನೆ ಸಂಭವಿಸಿದ ಕೂಡಲೇ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button