Latest

ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿದ್ದ 7 ಜನರು ಸಾವಿಗೀಡಾಗಿದ್ದು, ಮೂವರನ್ನು ರಕ್ಷಿಸಲಾಗಿದೆ.

ತಮಿಳುನಾಡಿನ ಊಟಿ ಬಳಿಯ ಕುನೂರ್ ಬಳಿ ಈ ದುರಂತ ಸಂಭವಿಸಿದೆ. ಸೇನಾ ಹೆಲಿಕಾಪ್ಟರ್ ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 14 ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ಈಗಾಗಲೇ ಮೂವರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ನಲ್ಲಿ ರಕ್ಷಣಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಕೂಡ ಇದ್ದರು ಎಂಬ ಮಾಹಿತಿ ಇದೆ. ಆದರೆ ಈ ಬಗ್ಗೆ ಸೇನಾ ಮೂಲಗಳಿಂದಾಗಲಿ ಅಥವಾ ಕೇಂದ್ರ ಸರ್ಕಾರದಿಂದಾಗಲಿ ಅಧಿಕೃತವಾಗಿ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತಾ ಟಫ್ ರೂಲ್ಸ್…?

Related Articles

Back to top button