EducationKarnataka NewsLatest
*ಶಾಲಾ ಮಕ್ಕಳ ಹಾಲಿನ ಪೌಡರ್ ಕದ್ದೊಯ್ಯುತ್ತಿದ್ದ ಮುಖ್ಯ ಶಿಕ್ಷಕ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿದ್ದ ಹಾಲಿನ ಪೌಡರ್ ಪ್ಯಾಕೇಟ್ ಕದ್ದೊಯ್ಯುತ್ತಿದ್ದ ಮುಖ್ಯ ಶಿಕ್ಷಕರೊಬ್ಬರು ಅಮಾನತುಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಗಣೇಶ್ ಅಮಾನತುಗೊಂಡವರು. ಸೋಮವಾರ ಶಾಲೆಯಲ್ಲಿದ್ದ ಹತ್ತು ಹಾಲಿನ ಪೌಡರ್ ಪ್ಯಾಕೇಟ್ ಗಳನ್ನು ಕದ್ದೊಯ್ಯುತ್ತಿದ್ದಾಗ ಸ್ಥಳೀಯರಿಗೆ ಶಿಕ್ಷಕ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಶಿಕ್ಷಕನ ಕಳ್ಳಾಟದ ಬಗ್ಗೆ ದೂರು ದಾಖಲಾಗಿತ್ತು.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಡಿಡಿಪಿ ಐ, ಶಿಕ್ಷಕ ಗಣೇಶ್ ಅವರನ್ನು ಅಮಾನತುಮಾಡಿ ಆದೇಶ ಹೊರಡಿಸಿದ್ದಾರೆ. ಶಿಕ್ಷಕನ ವಿರುದ್ಧ ವಿಚಾರಣೆ ಮುಂದುವರೆದಿದೆ



