Latest

ಹಾಲಿನ ಉತ್ಪನ್ನಗಳ ಬೆಲೆ ಏರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಲೆ ಏರಿಕೆ ಬಿಸಿ ನಡುವೆ ಗ್ರಾಹಕರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಹಾಲಿನ ಉತ್ಪನ್ನಗಳ ದರ ಏರಿಕೆಯಾಗಿದೆ.

ಹಾಲಿನ ಉತ್ಪನ್ನಗಳ ಮೇಲೆ ಶೇ.5ರಷ್ಟು ಜಿಎಸ್ ಟಿ ವಿಧಿಸಲಾಗಿದ್ದು, ನಾಳೆಯಿಂದಲೇ ಹೊಸ ದರ ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ತುಪ್ಪ ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಾಗಲಿದೆ.

ಪ್ರತಿ ಹಾಲಿನ ಉತ್ಪನ್ನದ ಮೇಲೆ ಸರಾಸರಿ 1ರಿಂದ 3 ರೂಪಾಯಿ ವರೆಗೆ ಬೆಲೆ ಹೆಚ್ಚಾಗಲಿದೆ. ಪ್ಯಾಕೇಟ್ ಗಳ ಮೇಲೆ ಹಳೆಯ ದರಗಳೇ ನಮೂದಾಗಿದ್ದರೂ ಗ್ರಾಹಕರು ನಾಳೆಯಿಂದ ಹೊಸ ದರ ನೀಡಬೇಕು ಎಂದು ಕೆ ಎಂ ಎಫ್ ತಿಳಿಸಿದೆ.
ಭಾರಿ ಮಳೆಗೆ ಭೀಕರ ಪ್ರವಾಹ; ಭದ್ರಾ ನದಿಯಲ್ಲಿ ತೇಲಿ ಬರುತ್ತಿರುವ ಶವಗಳು; ಕಂಗಾಲಾದ ಗ್ರಾಮಸ್ಥರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button