Karnataka News

*ಗ್ರಾಹಕರಿಗೆ ಮತ್ತೊಂದು ಶಾಕ್: ಹಾಲಿನ ದರ ಏರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ಜೀವನ ನಡೆಸುವುದೂ ದುಸ್ತರವಾಗಿದೆ. ಬಸ್ ಟಿಕೆಟ್ ದರ, ಮೆಟ್ರೋ ದರ, ತರಕಾರಿ-ಹಣ್ಣಿನ ದರಗಳು ಏರಿಕೆಯಾಗಿರುವ ಬೆನ್ನಲ್ಲೇ ಇದೀಗ ಹಾಲಿನ ದರ ಏರಿಕೆಯಾಗಲಿದೆ. ಈ ಬಗ್ಗೆ ಕೆ ಎಂ ಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.

ಹಾಲಿನ ದರ 5 ರೂಪಾಯಿ ಏರಿಕೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಒಂದು ವಾರ ಅಥವಾ ಹತ್ತು ದಿನಗಳಲ್ಲಿ ಹಾಲಿನ ದರ ಏರಿಕೆಯಾಗಲಿದೆ ಎಂದರು.

ಹೆಚ್ಚಳವಾಗಲಿರುವ ಹಾಲಿನ ದರ ರೈತರಿಗೆ ಸಿಗಲಿದೆ. ಹಾಲು ಉತ್ಪಾದಕರು ಪ್ರೋತ್ಸಾಹ ಧನ ಹೆಚ್ಚಳ ಮಾಡುವಂತೆ ಒತ್ತಾಯಿಸಿದ್ದರು. ಹಾಗಾಗಿ ಹಾಲಿನ ದರ ಏರಿಕೆ ಅನಿವಾರ್ಯವಾಗಿದೆ ಎಂದು ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button