ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷಕ್ಕೆ ಸರ್ಕಾರ ಗ್ರಾಹಕರಿಗೆ ಹೊಸ ಶಾಕ್ ನೀಡಲು ಮುಂದಾಗಿದೆ. ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರದಲ್ಲಿ ಏರಿಕೆಯಾಗಲಿದೆ ಎಂದು ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭಿಮಾನಾಯ್ಕ್, ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರದಲ್ಲಿ ಏರಿಕೆಯಾಗಲಿದೆ. ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಿಸುವಂತೆ ಪ್ರಸ್ತಾವನೆ ಬಂದಿದೆ. ಮುಖ್ಯಮಂತ್ರಿಗಳು ಒಪ್ಪಿಗೆ ಕೊಟ್ಟ ಬಳಿಕ ಹಾಲಿನ ದರ ಏರಿಕೆಯಾಗಲಿದೆ ಎಂದರು.
ಇನ್ನು ಈಗಿರುವ ಹೆಚ್ಚುವರಿ ನಂದಿನಿ ಹಾಲಿನ ದರ ಕಡಿತ ಮಾಡಲು ನಿರ್ಧರಿಸಲಾಗಿದೆ. ಹೆಚ್ಚುವರಿ 50ML ನಂದಿನಿ ಹಾಲಿನ ದರ ಕಡಿತವಾಗಲಿದೆ ಎಂದು ತಿಳಿಸಿದರು.
ಅಲ್ಲದೇ ನಂದಿನಿ ಉತ್ಪನ್ನದಿಂದ ಇಡ್ಲಿ, ದೋಸೆ ಹಿಟ್ಟು ಸೇರಿದಂತೆ ಇತರ ಉತ್ಪನ್ನಗಳು ಮಾರುಕಟ್ಟೆಗೆ ಪರಿಚಯಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಒಟ್ಟಾರೆ ಹೆಚ್ಚುವರಿ 50ML ನಂದಿನ ಹಾಲಿನ ದರ 2 ರೂಪಾಯಿ ಇಳಿಸಿ ಬಳಿಕ ಸಂಕ್ರಾಂತಿ ನಂತರ ಮತ್ತೆ ನಂದಿನ ಹಾಲಿನ ದರವನ್ನು ಏರಿಕೆ ಮಾಡಲು ಕೆ ಎಂ ಎಫ್ ಮುಂದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ