ಪ್ರಗತಿವಾಹಿನಿ ಸುದ್ದಿ; ಮೈಸೂರು: ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಾಲಿನ ದರ ಏರಿಕೆ ಎಂದಕೂಡಲೇ ಎಲ್ಲರೂ ಗಾಬರಿಯಾಗ್ತಾರೆ. ದರ ಏರಿಕೆಯಲ್ಲಿ ಎರಡು ರೀತಿ ಇದೆ. ಒಂದು ಹಾಲು ಉತ್ಪಾದಕರಿಗೆ ಹೆಚ್ಚಿನ ದರವನ್ನು ಕೊಡುವುದು. ಇನ್ನೊಂದು ಖರೀದಿ ಮಾಡುವವರಿಗೆ ದರ ಜಾಸ್ತಿ ಮಾಡುವುದು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಎರಡೂ ದರ ಕಡಿಮೆ ಇದೆ. ಹಾಲು ಉತ್ಪಾದಕರಿಗೆ ನಾವು ಸಹಾಯಮಾಡಬೇಕಿದೆ. ಮುಂದಿನ ದಿನಗಳಲ್ಲಿ ಯಾರಿಗೂ ಹೊರೆಯಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ಇನ್ನು ನಂದಿನಿ ಹಾಗೂ ಅಮೂಲ್ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಗೊಂದಲ ಬೇಡ ನಂದಿನಿ ಬೇರೆ ಸಂಸ್ಥೆ, ಅಮೂಲ್ ಬೇರೆ ಸಂಸ್ಥೆ. ವಿಲೀನ ಪ್ರಶ್ನೆ ಉದ್ಭವಿಸಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ