Kannada NewsLatestSports
*ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಖ್ಯಾತ ಕ್ರಿಕೆಟಿಗನಿಗೆ ಜೈಲು ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ, ಲೆಗ್ ಸ್ಪಿನ್ನರ್ ಸಂದೀಪ್ ಲಮಿಚಾನೆಗೆ ಜೈಲು ಶಿಕ್ಷೆ ಪ್ರಕಟವಾಗಿದೆ.
ಅತ್ಯಾಚಾರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕ್ರಿಕೆಟಿಗ ಸಂದೀಪ್ ಲಮಿಚಾನೆ ದೋಷಿ ಎಂದು ಕಠ್ಮಂಡು ನ್ಯಾಯಾಲಯ ತೀರ್ಪು ನೀಡಿದೆ. ಆದರೆ ಅಪರಾಧಿಗೆ ಎಷ್ಟು ವರ್ಷ ಜೈಲು ಶಿಕ್ಷೆ ಎಂಬುದನ್ನು ಪ್ರಕಟಿಸಿಲ್ಲ.
ಮುಂದಿನ ವಿಚಾರಣೆಯಲ್ಲಿ ಅಪರಾಧಿಯ ಜೈಲು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಅತ್ಯಾಚಾರ ಆರೋಪದಲ್ಲಿ ಸಂದೀಪ್ ರನ್ನು ನೇಪಾಳ ಪೊಲೀಸರು ಅಕ್ಟೋಬರ್ 6ರಂದು ಬಂಧಿಸಿದ್ದರು.




