
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಅಪ್ರಾಪ್ತ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಜಿಲ್ಲೆಯ ಆಳಂದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
14 ವರ್ಷದ ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಬಳಿಕ ಹತ್ಯೆಗೈದಿದ್ದ ಪ್ರಕರಣ ಸಂಬಂಧ ಆರೋಪಿ 16ವರೆ ವರ್ಷದ ಬಾಲಕನನ್ನು ಬಂಧಿಸಿರುವ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದು, ಕ್ವಲ 9 ದಿನಗಳಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸಿ ಬಾಲನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ಆಳಂದ ಪೊಲೀಸರ ಕ್ರಮಕ್ಕೆ ಗೃಹ ಸಚಿವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನವೆಂಬರ್ 1ರಂದು ಬಹಿರ್ದೆಸೆಗೆ ಎಂದು ಮನೆಯಿಂದ ಹೊರಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಆಳಂದ ಪೊಲೀಸರು 24 ಗಂಟೆಯಲ್ಲಿ ಆರೋಪಿ ಪತ್ತೆ ಹಚ್ಚಿ ಬಂಧಿಸಿದ್ದರು. ಆರೋಪಿ ಬಂಧನದ ಬಳಿಕವೇ ಆತ ಹದಿನಾರುವರೆ ವರ್ಷದ ಅಪ್ರಾಪ್ತ ಎಂಬುದು. ಅಪ್ರಾಪ್ತ ಬಾಲಕನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ನಡೆದಿತ್ತು.
ಅನಾರೋಗ್ಯ ಎಂದು ಆಸ್ಪತ್ರೆಗೆ ದಾಖಲಾಗಿದ್ದ ಎಂಜಿನಿಯರ್ ಗಳ ಕಳ್ಳಾಟ ಬಯಲು
https://pragati.taskdun.com/latest/raichur4-engineerlokayuktaarrested/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ