Latest

ಪ್ರೀತಿಸುವಂತೆ ಪೀಡಿಸುತ್ತಿದ್ದ ಅನ್ಯಕೋಮಿನ ಯುವಕ; ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಬಾಲಕಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತ ಹಿನ್ನೆಲೆಯಲ್ಲಿ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಬಂಟ್ವಾಳದ ಕಣಿಯೂರಿನಲ್ಲಿ ನಡೆದಿದೆ.

ಬಾಲಕಿ ಕುಟುಂಬ ಕಣಿಯೂರಿನ ಮಸೀದಿ ಹಿಂಬದಿಯ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ನೇಣಿಗೆ ಕೊರಳೊಡ್ಡಿದ್ದಾಳೆ. ಕಣಿಯೂರು ನಿವಾಸಿ ಸಾಹುಲ್ ಹಮೀದ್ ವಿರುದ್ಧ ಆರೋಪ ಕೇಳಿಬಂದಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಇತ್ತೀಚಿನ ಮಾಹಿತಿ ಪ್ರಕಾರ ಆರೋಪಿ ಸಾಹಿಲ್ ಹಮೀದ್ ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಮೃತ ಬಾಲಕಿ ಮನೆಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮುಖಂಡರು ಭೇಟಿ ನೀಡಿದ್ದು ಕುಟುಂಬ ಸದಸ್ಯರ ಜತೆ ಮಾತುಕತೆ ನಡೆಸಿದ್ದಾರೆ. ಇನ್ನು ಇದೊಂದು ವ್ಯವಸ್ಥಿತ ಲವ್ ಜಿಹಾದ್ ಕೃತ್ಯ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಗಳು ಕೇಳಿಬಂದಿವೆ.
ಕರೆಂಟ್ ಶಾಕ್; ತಾಯಿ, ಇಬ್ಬರು ಮಕ್ಕಳು ದುರ್ಮರಣ

Related Articles

Back to top button