Kannada NewsKarnataka NewsLatest

*ಬಾಲಕಿ ಮೇಲೆ ಅತ್ಯಾಚಾರ; ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ಜಿಲ್ಲಾ ಎರಡನೇ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.

2020ರಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಈಗ ಜೈಲು ಶಿಕ್ಷೆ ಪ್ರಕಟವಾಗಿದೆ. 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿ ತಾಯಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ತಾಯಿಯನ್ನು ನೋಡಿಕೊಳ್ಳಲು ಆಸ್ಪತ್ರೆಗೆ ಬಂದಿದ್ದ ಬಾಲಕಿ, ತಾಯಿಗೆ ಊಟ ತರಲೆಂದು ಆಸ್ಪತ್ರೆಯಿಂದ ಹೊರ ಬಂದಿದ್ದಳು. ಊಟಕ್ಕಾಗಿ ಹೊರ ಬಂದ ಬಾಲಕಿಯನ್ನು ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಎಳೆದೊಯ್ದು ಶಿವಮೊಗ್ಗ ಹೊರಭಾಗಕ್ಕೆ ಕೊಂಡೊಯ್ದು ಅತ್ಯಾಚಾರವೆಸಗಿದ್ದರು.

ಕೃತ್ಯದ ಬಳಿಕ ಬಾಲಕಿಯನ್ನು ಆಸ್ಪತ್ರೆ ಬಳಿ ಬಿಟ್ಟು ಹೋಗಿದ್ದರು. ಆಸ್ಪತ್ರೆಯ ಭದ್ರತಾ ಸಿಬ್ಬದಿಗಳು, ದುಷ್ಕರ್ಮಿಗಳು ಬಾಲಕಿಯನ್ನು ಕರೆದೊಯ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಸ್ಪತ್ರೆಗೆ ವಾಪಸ್ ಆದ ಬಾಲಕಿಯನ್ನು ಪೊಲೀಸರು ವಿಚಾರಿಸಿದಾಗ ನಾಲ್ವರು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ಮಾಡಿದ್ದಾಗಿ ತಿಳಿಸಿದ್ದಳು. ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Home add -Advt

ಘಟನೆ ಸಂಬಂಧ ಆರೋಪಿಗಳಾದ ವಿನಯ್, ಪ್ರದೀಪ್, ಮನೋಜ್, ಪ್ರಜ್ವಲ್ ಎಂಬುವವರನ್ನು ಬಂಧಿಸಿದ ಪೊಲೀಸರು, ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನ್ಯಾಯಾಲಯ ಕಾಮುಕರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ 1 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button