Latest

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಪೈಶಾಕಿ ಕೃತ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಕಾಮಾಂಧನೊಬ್ಬ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ತಲಘಟ್ಟಪುರದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಬಾಲಕಿಯನ್ನು ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆರೋಪಿ ಈ ಕೃತ್ಯವೆಸಗಿದ್ದಾನೆ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ತಲಘಟ್ಟಪುರ ಠಾಣೆ ಪೊಲೀಸರು ಕಾಮುಕ ವೇಣುಗೋಪಾಲ್ ನನ್ನು ಬಂಧಿಸಿದ್ದಾರೆ.

ಸಂತ್ರಸ್ತ ಬಾಲಕಿಯ ಕುಟುಂಬದವರು ಕೂಲಿ ಕೆಲಸಕ್ಕೆಂದು ಬೆಂಗಳೂರಿನ ತಘಟ್ಟಪುರ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಕಾಮುಕ ವೇಣುಗೋಪಾಲ್ 15 ವರ್ಷದ ಬಾಲಕಿಯ ಮೇಲೆ ತನ್ನ ನೀಚ ದೃಷ್ಟಿ ಬೀರಿದ್ದ. ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ.

ಖಾನಾಪುರದಲ್ಲಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

Home add -Advt

https://pragati.taskdun.com/belagavikhanapurabiketippeaccident/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button