ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಬ್ಬಿನ ಗದ್ದೆಯಲ್ಲಿ ಬಾಲಾಕಿಯ ಶವ ಪತ್ತೆಯಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರ್ಗಿ ಹೊರವಲಯದ ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಶವ ಪತ್ತೆಯಾಗಿದೆ. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಕಲಬುರ್ಗಿ ಎಸ್ ಪಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ಸಂಜೆ ಬಾಲಕಿ ಬಹಿರ್ದೆಸೆಗೆಂದು ಹೋದವಳು ವಾಪಸ್ ಮನೆಗೆ ಬಂದಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೀಗ ಬಾಲಕಿ ಶವ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ಬಾಲಕಿ 9ನೇ ತರಗತಿಯಲ್ಲಿ ಓದುತ್ತಿದ್ದಳು ಎನ್ನಲಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಲಬುರ್ಗಿ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ನಡೆಸಿದ್ದಾರೆ.
ಬೆಳ್ಳಂ ಬೆಳಗ್ಗೆ ಮೈದಾನಕ್ಕೆ ಧಾವಿಸಿದ ಹುಕ್ಕೇರಿ ಸ್ವಾಮೀಜಿ
https://pragati.taskdun.com/latest/hukkeri-swamiji-rushed-to-the-ground-in-the-morning/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ