Karnataka NewsLatest

ಜೂ.16 ರಂದು ಮಿನಿ ಉದ್ಯೋಗ ಮೇಳ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂನ್.16 2023 ರಂದು ಬೆಳಿಗ್ಗೆ  10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ, ಪಿಯುಸಿ, ಐಟಿಐ (ಪಿಟ್ಟರ್, ವೆಲ್ಡರ್, ಮಷಿನಿಷ್ಟ್, ಎಲೆಕ್ಟ್ರಿಷಿಯನ್,) ಹಾಗೂ ಡಿಪ್ಲೋಮಾ ಮತ್ತು ಯಾವದೇ ಪದವಿ ಮತ್ತು ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಮಿನಿ ಉದ್ಯೋಗ ಮೇಳ (Mini Job Fair) ವನ್ನು ಹಲಗಾ ಗ್ರಾಮ ಪಂಚಾಯಿತಿ ಬಳಿಯ ಕಲ್ಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.

 ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ  ಹೆಸರು ನೋಂದಾಯಿಸಿಕೊಳ್ಳಲು https://forms.gle/cftDgjSgLTtQng2H7 ಈ ವೆಬ್‌ಸೈಟ್ ಗೆ ಭೇಟಿ ನೀಡಬಹುದು.  ಅಥವಾ ಮೊಬೈಲ್ ಸಂಖ್ಯೆ: 8147685479/9880149513 ಗೆ ಸಂಪರ್ಕಿಸಬಹುದು.  

 ಮಿನಿ ಉದ್ಯೋಗಮೇಳದಲ್ಲಿ ಪ್ರತಿಷ್ಠಿತ 5 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದೆ ಹಾಗೂ ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button