Karnataka News

*ಲಾರಿ ಡಿಕ್ಕಿ ರಭಸಕ್ಕೆ ಹಾರಿ ಹೋದ ಬೈಕ್ ಸವಾರನ ರುಂಡ: ಇಬ್ಬರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಮಿನಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಗೊರಹಳ್ಳಿ ಕೆರೆ ಏರಿಮೇಲೆ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಓರ್ವ ಬೈಕ್ ಸವಾರನ ರುಂಡವೇ ಹಾರಿ ಹೋಗಿದೆ.

ಮೃತರು ಪಿರಿಯಾಪಟ್ಟಣದ ಹಿಟ್ನೆಬಾಗಿಲು ನಿವಾಸಿಗಳು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button