Kannada NewsKarnataka NewsLatest

*ಪಾದಚಾರಿಗಳ ಮೇಲೆ ಹರಿದ ಮೈನಿಂಗ್ ಲಾರಿ: ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬಂದ ಮೈನಿಂಗ್ ಲಾರಿ ಇಬ್ಬರು ಪಾದಚಾರಿಗಳ ಮೇಲೆ ಹರಿದು ಹೋಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವೆಂಕಟಗಿರಿಯಲ್ಲಿ ಈ ಘಟನೆ ನಡೆದಿದೆ. ಹೊಸಪೇಟೆ ನಿವಾಸಿಗಳಾದ ಕುಮಾರ್ (34) ಹಾಗೂ ಮಂಜುನಾಥ್ (38) ಮೃತ ದುರ್ದೈವಿಗಳು.

ರಸ್ತೆ ಬದಿ ನಡೆದು ಹೋಗುತ್ತಿದ್ದ ವೇಳೆ ಮೈನಿಂಗ್ ಲಾರಿ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಇಬ್ಬರ ಮೇಲೂ ಹರಿದು ಹೋಗಿದೆ. ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸಂಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button