Kannada NewsLatest

ನೀರಾವರಿ ಸಲಹಾ ಸಮಿತಿಗೆ ಡಿಸಿಎಂ ಲಕ್ಷ್ಮಣ ಸವದಿ ಬದಲು ಸಚಿವ ಆನಂದಸಿಂಗ್ ನೇಮಕ

ಪ್ರಗತಿವಾಹಿನಿ ಸುದ್ದಿ, ಬಳ್ಳಾರಿ : ತುಂಗಾಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಗೆ ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಈ ಮುಂಚೆ ಈ ಸಮಿತಿಗೆ ಉಪಮುಖ್ಯಮಂತ್ರಿ, ಸಾರಿಗೆ ಮತ್ತು ಕೃಷಿ ಸಚಿವರು ಹಾಗೂ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ  ಲಕ್ಷ್ಮಣ ಸಂಗಪ್ಪ ಸವದಿ ಅವರನ್ನು ನೇಮಕ ಮಾಡಲಾಗಿತ್ತು.

ಈಗ ಅವರ ಬದಲಿಗೆ ಸಚಿವ ಆನಂದಸಿಂಗ್ ಅವರನ್ನು ನೇಮಿಸಿ ಜಲಸಂಪನ್ಮೂಲ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಗಳು ರಾಜ್ಯಪಾಲರದ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಆದೇಶ ಹೊರಡಿಸಿದ್ದಾರೆ.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button