ಪ್ರಗತಿವಾಹಿನಿ ಸುದ್ದಿ; ಮಂಡ್ಯ: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಉಲ್ಲಂಘನೆ ಮಾಡಿ ಸಭೆ ನಡೆಸಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮೇ 16ರಂದು ಮಂಡ್ಯದ ಹಲವು ಕಾಲೇಜುಗಳಲ್ಲಿ ಸಚಿವರೆ ಸಭೆ ನಡೆಸುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಸಚಿವ ಅಶ್ವತ್ಥ ನಾರಾಯಣ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ವಿ.ರವಿಶಂಕರ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 1860 ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ 1950, 1951 ಅಡಿ ಅಶ್ವತ್ಥ ನಾರಾಯಣ ವಿರುದ್ಧ ಪ್ರಕರಣ ದಾಖಲಾಗಿದೆ.
ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ
ಮಳಲಿ ಮಸೀದಿಯ ಹಿಡಿ ಮರಳನ್ನೂ ಬಿಟ್ಟು ಕೊಡಲ್ಲ; ಅಬ್ದುಲ್ ಮಜೀದ್ ಹೇಳಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ