Kannada NewsKarnataka NewsLatest
ಮತ್ತೊಂದು ಅಪಘಾತ: ರಸ್ತೆ ಸಾರಿಗೆ ಸಂಸ್ಥೆ ಬಸ್ ಪಲ್ಟಿ

ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು – ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿದೆ.
ಧಾರವಾಡದಿಂದ ಬೆಳಗಾವಿಗೆ ಹೋಗುತ್ತಿದ್ದ ಸರ್ಕಾರಿ ರಾಜ ಹಂಸ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ. ಸರ್ಕಾರಿ ಬಸ್ ನಲ್ಲಿದ್ದ 10 ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯವಾಗಿದೆ.
ಬಸ್ ಪಲ್ಟಿಯಾಗಿ ಮುಂದೆ ಸಾಗುತ್ತದ್ದ ಜೆಸಿಬಿ ಮೇಲೆ ಎರಗಿದೆ. ಜೆಸಿಬಿ ಚಾಲಕನಿಗೂ ಗಂಭೀರ ಗಾಯವಾಗಿದೆ.
ಎಲ್ಲಾ ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ ಬಳಿ ಭೀಕರ ಅಪಘಾತ: ಸ್ವಾಮೀಜಿ ಸೇರಿ ನಾಲ್ವರ ಸಾವು




