Latest

ಪ್ರವಾಸೋದ್ಯಮ ಸಚಿವರಿಗೂ ಕೊರೊನಾ ಪಾಸಿಟೀವ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಪಾಸಿಟೀವ್ ಬಂದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿ.ಟಿ.ರವಿ, ಅವರ ಪತ್ನಿ ಪಲ್ಲವಿ, ಗನ್ ಮ್ಯಾನ್ ಮತ್ತು ಕಾರಿನ ಚಾಲಕ ಸೇರಿ ಕಚೇರಿ ಸಿಬ್ಬಂದಿ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಇದೀಗ ವರದಿ ಬಂದಿದ್ದು, ಪತ್ನಿ ಪಲ್ಲವಿ, ಗನ್ ಮ್ಯಾನ್ ಮತ್ತು ಕಾರಿನ ಚಾಲಕ ಸೇರಿ ಕಚೇರಿ ಸಿಬ್ಬಂದಿಗೆ ನೆಗೆಟಿವ್ ಬಂದಿದೆ. ಆದರೆ ಸಿ.ಟಿ.ರವಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಸಿ.ಟಿ.ರವಿ ಈ ಬಗ್ಗೆ ಟ್ವೀಟ್ ಮಾಡಿದ್ದು, ನಿನ್ನೆ ನಾನು, ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್ 19 ಪರೀಕ್ಷೆಗೆ ಒಳಪಟ್ಟಿದ್ದೆವು. ಪಲ್ಲವಿ ಹಾಗೂ ನನ್ನ ಗನ್-ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲರದ್ದು ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿ. ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸಲಿದ್ದು, ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ ಎಂದು ತಮಗೆ ಕೊರೊನಾ ಇರುವುದನ್ನ ದೃಢಪಡಿಸಿದ್ದಾರೆ.

Related Articles

Back to top button