Kannada NewsKarnataka NewsLatestPolitics
*ಕೃಷಿ ಸಚಿವರ ವಿರುದ್ಧ ಲಂಚದ ಆರೋಪ; ಸಹಾಯಕ ಕೃಷಿ ಅಧಿಕಾರಿಗಳಿಂದ ರಾಜ್ಯಪಾಲರಿಗೆ ದೂರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿರುವ 7 ಜನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ.
ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳು 6-8 ಲಕ್ಷ ರೂಪಾಯಿ ಲಂಚ ಪಡೆದಿರುವ ಆರೋಪ ಮಾಡಿದ್ದು, ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಡಿಕೊಳ್ಳುವುದಾಗಿ ಅಧಿಕಾರಿಗಳು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಾಗಮಂಗಲ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ಸೇರಿದಂತೆ 7 ಜನ ಸಹಾಯಕ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ