Latest

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಮುಖ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಇಳಿಮುಖವಾಗಿದೆ. ದೇಶದಾದ್ಯಂತ 75,809 ಹೊಸ ಕೊರೋನಾ ಕೇಸು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 42,80,423ಕ್ಕೆ ಏರಿಕೆಯಾಗಿದೆ.

ಎರಡು ದಿನಗಳಿಂದ ದೇಶದಲ್ಲಿ 90 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದರು. ಕಳೆದ 24 ಗಂಟೆಯಲ್ಲಿ ಸೋಂಕಿತರಲ್ಲಿ ಭಾರೀ ಇಳಿಮುಖವಾಗಿರುವುದು ದೇಶದ ಜನತೆ ನಿಟ್ಟುಸಿರುಬಿಡುವಂತಾಗಿದೆ.

Home add -Advt

ಇನ್ನು ಕಳೆದ 24 ಗಂಟೆಗಳಲ್ಲಿ 1,133 ಜನರು ಸಾವನ್ನಪ್ಪಿದ್ದು, ಈ ವರೆಗೆ ಬಲಿಯಾದವರ ಸಂಖ್ಯೆ 72,775ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

42,80,423 ಮಂದಿ ಸೋಂಕಿತರ ಪೈಕಿ 33,23,951 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 8,83,697 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related Articles

Back to top button