ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಭೂಕಬಳಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಸುಧಾಕರ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸಚಿವ ಡಿ.ಸುಧಾಕರ್ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಚಿವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ಐಆರ್ ಗೆ ತಡೆಯಾಜ್ಞೆ ನೀಡಿದ್ದು, ಸಚಿವರ ವಿರುದ್ಧದ ತನಿಖೆಗೆ ತತ್ಕಾಲಿಕ ತಡೆ ನೀಡಿದೆ.
ಇನ್ನು ತಮ್ಮ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುವ ಸಚಿವರು, ಆರೋಪದಲ್ಲಿ ಹುರುಳಿಲ್ಲ. ಭೂಕಬಳಿಕೆಯಾಗಿಲ್ಲ, ವ್ಯಾವಹಾರಿಕವಾಗಿ ಎಲ್ಲ ನಿಯಮ ಪಾಲನೆ ಮಾಡಿದ್ದೇನೆ ಎಂದು ಹೈಕೋರ್ಟ್ ಗೆ ಮನವರಿಕೆ ಮಾಡಿಕೊಡುವ ಯತ್ನ ಮಾಡಿದ್ದೇವೆ. ಘಟನೆ ನಡೆದಾಗ ನಾನು ಸ್ಥಳದಲ್ಲಿಯೇ ಇರಲಿಲ್ಲ ನನ್ನ ವಿರುದ್ಧ ಒಳಸಂಚು ನಡೆಸಿ ದೂರು ದಾಖಲಿಸಲಾಗಿದೆ. ಅಗತ್ಯ ದಾಖಲೆಗಳನ್ನು ಕೋರ್ಟ್ ಗೆ ನೀಡಲಾಗಿದೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ