Latest

2-3 ವಾರದಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಆದರೆ…

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು 2-3 ವಾರಗಳಲ್ಲಿ ಬೆಂಗಳೂರಿನಲ್ಲಿ ನಿಯಂತ್ರಣಕ್ಕೆ ಬರಬಹುದು. ಆದರೆ ಗ್ರಾಮೀಣ ಭಾಗಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯಾವುದೇ ಸೋಂಕು ಮೊದಲು ನಗರ ಪ್ರದೇಶಗಳಲ್ಲಿ, ಕ್ಯಾಪಿಟಲ್ ಸಿಟಿಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಕಾರಣ ಚಲನವಲಗಳು ಹೆಚ್ಚಿರುವುದರಿಂದ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತದೆ. ಬೆಂಗಳೂರಿನಲ್ಲಿ ಬಹುಶ: 2-3 ವಾರಗಳಲ್ಲಿ ಕೊರೊನಾ ಸೋಂಕು ಹತೋಟಿಗೆ ಬರಬಹುದು. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಏರಿಕೆಯಾಗಲಿದೆ. ಹಾಗಾಗಿ ಆಕ್ಸಿಜನ್, ಬೆಡ್, ವೆಂಟಿಲೇಟರ್ ವ್ಯವಸ್ಥೆ ಮಾಡಿಕೊಳ್ಳುವ ಅಗತ್ಯವಿದೆ ಎಂದರು.

ಇನ್ನು ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗುತ್ತಿರುವ ಬಗ್ಗೆ ಮಾತನಾಡಿದ ಸಚಿವರು, ರೋಗನಿರೋಧಕ ಶಕ್ತಿ ಕಡಿಮೆಯಿದ್ದವರಲ್ಲಿ ಇಂತಹ ಸೋಂಕು ಪತ್ತೆಯಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು. ಬ್ಲ್ಯಾಕ್ ಫಂಗಸ್ ಉಚಿತ ಚಿಕಿತ್ಸೆ ಬಗ್ಗೆಯೂ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

ಇಡೀ ದೇಶದಲ್ಲಿಯೇ ಉಚಿತ ಚಿಕಿತ್ಸೆ ನೀಡುತ್ತಿರುವುದು ಕರ್ನಾಟಕದಲ್ಲಿ ಮಾತ್ರ. ಟೆಸ್ಟಿಂಗ್, ಕ್ವಾರ‍ಂಟೈನ್, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕೂಡ ಉಚಿತ ಚಿಕಿತ್ಸೆ, ಔಷಧಿಗಳನ್ನು ನೀಡಲಾಗಿದೆ ಎಂದು ಹೇಳಿದರು.
ಕೇಂದ್ರದ ಆಯುಷ್ಮಾನ್ ಭಾರತ್ ಯಾವ ಪುರುಷಾರ್ಥಕ್ಕೆ?; ಹೆಚ್ ಡಿಕೆ ಕಿಡಿ

Home add -Advt

Related Articles

Back to top button